ಸಿಬಿಐ ನ ಹಂಗಾಮಿ ನಿರ್ದೇಶಕರಾಗಿದ್ದ ಅವಧಿಯಲ್ಲಿ ಸಿಬಿಐ ಅಧಿಕಾರಿಯೊಬ್ಬರನ್ನು ವರ್ಗಾವಣೆ ಮಾಡಿದ್ದಕ್ಕೆ ಸಂಬಂಧಿಸಿದಂತೆ ನಾಗೇಶ್ವರ್ ರಾವ್ ಸುಪ್ರೀಂ ಕೋರ್ಟ್ ಕ್ಷಮೆ ಯಾಚಿಸಿದ್ದಾರೆ.
ಅಧಿಕಾರಿಗಳ ವರ್ಗಾವಣೆ ಮಾಡಬಾರದೆಂಬ ಸುಪ್ರೀಂ ಕೋರ್ಟ್ ನ ಆದೇಶದ ಹೊರತಾಗಿಯೂ ಸಹ ನಾಗೇಶ್ವರ್ ರಾವ್ ಬಿಹಾರದ ಆಶ್ರಯ ಮನೆ ಪ್ರಕರಣದ ತನಿಖೆ ನಡೆಸುತ್ತಿದ್ದ ಅಧಿಕಾರಿ ಶರ್ಮಾ ಅವರನ್ನು ವರ್ಗಾವಣೆ ಮಾಡಿದ್ದರು. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಕೋರ್ಟ್ ಆದೇಶ ಉಲ್ಲಂಘನೆಯಾಗಿದೆ ಎಂದು ಫೆ.07 ರಂದು ಸುಪ್ರೀಂ ಕೋರ್ಟ್ ಸಿಬಿಐ ಗೆ ಚಾಟಿ ಬೀಸಿತ್ತು. ಅಷ್ಟೇ ಅಲ್ಲದೇ ಕೋರ್ಟ್ ಅನುಮತಿ  ಇಲ್ಲದೇ ಅಧಿಕಾರಿಯನ್ನು ವರ್ಗಾವಣೆ ಮಾಡಿದ್ದ ನಾಗೇಶ್ವರ್ ರಾವ್ ಗೆ ನ್ಯಾಯಾಂಗ ನಿಂದನೆ ನೊಟೀಸ್ ನ್ನೂ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಗೆ ಕ್ಷಮೆ ಯಾಚಿಸಿರುವ ನಾಗೇಶ್ವರ್ ತಮ್ಮದು ತಪ್ಪಾಗಿದೆಯೆಂದೂ, ಉದ್ದೇಶಪೂರ್ವಕವಾಗಿ ಕೋರ್ಟ್ ಆದೇಶವನ್ನು ಉಲ್ಲಂಘನೆ ಮಾಡಿಲ್ಲವೆಂದೂ ಹೇಳಿದ್ದಾರೆ.
Summary
ಆದೇಶ ಉಲ್ಲಂಘನೆ: ಸುಪ್ರೀಂ ಕೋರ್ಟ್ ಕ್ಷಮೆ ಕೋರಿದ ನಾಗೇಶ್ವರ್ ರಾವ್ !
Article Name
ಆದೇಶ ಉಲ್ಲಂಘನೆ: ಸುಪ್ರೀಂ ಕೋರ್ಟ್ ಕ್ಷಮೆ ಕೋರಿದ ನಾಗೇಶ್ವರ್ ರಾವ್ !
Description
ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಗೆ ಕ್ಷಮೆ ಯಾಚಿಸಿರುವ ನಾಗೇಶ್ವರ್ ತಮ್ಮದು ತಪ್ಪಾಗಿದೆಯೆಂದೂ, ಉದ್ದೇಶಪೂರ್ವಕವಾಗಿ ಕೋರ್ಟ್ ಆದೇಶವನ್ನು ಉಲ್ಲಂಘನೆ ಮಾಡಿಲ್ಲವೆಂದೂ ಹೇಳಿದ್ದಾರೆ.

LEAVE A REPLY

Please enter your comment!
Please enter your name here