ಕಲಬುರಗಿ
ಡಿಸೆಂಬರ್ 8: ಮಹಾರಾಷ್ಟ್ರದಲ್ಲಿ ಮರಾಠ ಸಮುದಾಯಕ್ಕೆ ನೀಡಿರುವ ಮೀಸಲಾತಿ ಮಾದರಿಯಲ್ಲೇ ಕರ್ನಾಟಕದಲ್ಲಿ ವೀರಶೈವ ಲಿಂಗಾಯತರಿಗೆ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ವೀರಶೈವ ಲಿಂಗಾಯತ ಸಮುದಾಯ ಪ್ರತಿನಿಧಿಗಳು ಶನಿವಾರ ಕಲಬರಗಿಯಲ್ಲಿ ಪ್ರತಿಭಟನೆ ನಡೆಸಿದರು.
ಲಿಂಗಾಯತ ಸಮುದಾಯದಲ್ಲಿ ನಮಗೆ ಅಲ್ಪಸಂಖ್ಯಾತ ಸ್ಥಾನಮಾನ ಬೇಡ ಆದರೆ ಮೀಸಲಾತಿ ಬೇಕಾಗಿದೆ. ಸರ್ಕಾರವು ಆರ್ಥಿಕವಾಗಿ ಹಿಂದುಳಿದ ಸಮುದಾಯದವರನ್ನು ಗುರುತಿಸಿ ಮೀಸಲಾತಿ ನೀಡಬೇಕು, ಇತ್ತೀಚೆಗೆ ಮಹಾರಾಷ್ಟ್ರ ಸರ್ಕಾರ ಮರಾಠಿಗರಿಗೆ ನೀಡಿರುವ ರೀತಿಯಲ್ಲಿ ಕರ್ನಾಟಕದಲ್ಲಿ ವೀರಶೈವ ಲಿಂಗಾಯತರಿಗೂ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿದರು.
ಕಳೆದ ಹಲವು ದಿನಗಳಿಂದ ವೀರಶೈವ ಲಿಂಗಾಯತರು ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಹೋರಾಟ ನಡೆಸುತ್ತಿದ್ದಾರೆ. ಹಾಗೆಯೇ ನಮಗೆ ಅಲ್ಪಸಂಖ್ಯಾತ ಸ್ಥಾನಮಾನ ಬೇಡ ಎಂದು ಕೂಡ ಸ್ಪಷ್ಟಪಿಡಿಸಿದ್ದಾರೆ.
ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಅವರು ಡಿಸೆಂಬರ್ 10 ರಂದು ದೆಹಲಿಯಲ್ಲಿ ನಡೆಯಲಿರುವ ಲಿಂಗಾಯತ ಸಮುದಾಯದ ಕಾರ್ಯಾಗಾರವೊಂದರಲ್ಲಿ ಪಾಲ್ಗೊಳ್ಳಲಿದ್ದಾರೆ.