ನವದೆಹಲಿ: ‘ಕಾಂಗ್ರೆಸ್​ನದ್ದು ಗಾಂಧಿ ತತ್ವಗಳಿಗೆ ವಿರುದ್ಧವಾದ ಸಂಸ್ಕೃತಿ. ಬಾಪು ಸೂಚಿಸಿದ ಪಥದಲ್ಲಿ ಬಿಜೆಪಿ ನಡೆಯುತ್ತಿದೆ. ಕಾಂಗ್ರೆಸ್ ಮುಕ್ತ ಭಾರತವಾದ ಅವರ ಕನಸನ್ನು ಈಡೇರಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಉಪ್ಪಿನ ಸತ್ಯಾಗ್ರಹದ 89ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಬ್ಲಾಗ್​ನಲ್ಲಿ ಲೇಖನ ಬರೆದಿರುವ ಮೋದಿ, 1947ರಲ್ಲಿ ದೇಶಕ್ಕೆ ಸ್ವಾತಂತ್ರ್ಯ ಬಂದಾಗ ಕಾಂಗ್ರೆಸ್ ವಿಸರ್ಜಿಸುವಂತೆ ಗಾಂಧಿ ಕರೆ ನೀಡಿದ್ದರು.ಇದನ್ನು ಕಾಂಗ್ರೆಸ್ ನಾಯಕರು ಪಾಲಿಸಲಿಲ್ಲ. ಅಸಮಾನತೆ ಮತ್ತು ಜಾತಿ ಭೇದದಲ್ಲಿ ನಂಬಿಕೆ ಇಲ್ಲ ಎಂದು ಬಾಪು ಹೇಳಿದ್ದರು. ಆದರೆ, ಕಾಂಗ್ರೆಸ್ಸಿಗರು ಸಮಾಜವನ್ನು ಜಾತಿ ಆಧಾರದಲ್ಲಿ ಒಡೆದರು. ಕಾಂಗ್ರೆಸ್ ಅವಧಿಯಲ್ಲಿ ಮತೀಯ ಗಲಭೆ, ದಲಿತರ ಮಾರಣಹೋಮಗಳು ನಡೆದವು ಎಂದು ಅವರು ಆರೋಪಿಸಿದ್ದಾರೆ. ಕಾಂಗ್ರೆಸ್ ಮುಖಂಡರು ಅವಶ್ಯ ಕತೆಗಿಂತ ಹೆಚ್ಚಿನ ಸಂಪತ್ತನ್ನು ಸಂಗ್ರಹಿಸಬಾರದು ಎಂದು ಗಾಂಧಿ ಹೇಳಿದ್ದರು. ಆದರೆ, ಈಗಿನ ಕಾಂಗ್ರೆಸ್

ಇದಕ್ಕೆ ಸಂಪೂರ್ಣ ವಿರುದ್ಧವಾಗಿದೆ. ಎಲ್ಲ ಹಗರಣ ಗಳಲ್ಲಿ ಕಾಂಗ್ರೆಸ್ ನಾಯಕರ ಹೆಸರು ಕೇಳಿಬರುತ್ತಿದೆ ಎಂದು ಮೋದಿ ಟೀಕಿಸಿದ್ದಾರೆ.

LEAVE A REPLY

Please enter your comment!
Please enter your name here