ಧಾರವಾಡ : ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತ (ಕೆಎಸ್‌ಐಸಿ) ವತಿಯಿಂದ ಕರ್ನಾಟಕದ ಪಾರಂಪಾರಿಕ ಉತ್ಪನ್ನ ಮೈಸೂರ ಸಿಲ್ಕ್‌ ಸೀರೆಗಳ ಪ್ರದರ್ಶನ ಹಾಗೂ ಮಾರಾಟ ಮೇಳಕ್ಕೆ ಜಿಲ್ಲಾಧಿಕಾರಿ ಎಂ. ದೀಪಾ ಗುರುವಾರ ಚಾಲನೆ ನೀಡಿದರು. ನಗರದ ಹಳೆಯ ಡಿಎಸ್‌ಪಿ ಕಛೇರಿ ಎದುರಿನ ಭಾವಸಾರ ಮಂಗಲ ಕಾರ್ಯಾಲಯದಲ್ಲಿ ಡಿ.11ರವರೆಗೆ ಮೇಳ ನಡೆಯಲಿದೆ. 

ಮೇಳ ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಎಂ.ದೀಪಾ, ಧಾರವಾಡದಲ್ಲಿ ಪ್ರದರ್ಶನ ಮತ್ತು ಮಾರಾಟ ನಡೆಯುತ್ತಿರುವುದು ಸಂತಸದ ಸಂಗತಿ. ಗುಣಮಟ್ಟ ಮತ್ತು ಮೌಲ್ಯಕ್ಕೆ ಖಾತ್ರಿ ಇರುವ ಈ ಉತ್ಪನ್ನಗಳನ್ನು ಸಾರ್ವಜನಿಕರು ಪ್ರೋತ್ಸಾಹಿಸಬೇಕು ಎಂದು ಹೇಳಿದರು. 

ಭಾರತದಲ್ಲಿ ದೊರೆಯುವ ಬೇರೆಬೇರೆ ರೇಷ್ಮೆ ವಸ್ತ್ರಗಳಿಗಿಂತ ಮೈಸೂರ ಸಿಲ್ಕ್‌ ವಿಭಿನ್ನವಾಗಿದೆ. ಇದು ಹಳೇ ಮೈಸೂರು ಪ್ರದೇಶದಲ್ಲಿ ದೊರೆಯುವ ಪ್ರಾಕೃತಿಕ ರೇಷ್ಮೆ ಗೂಡಿನಿಂದ ದೊರೆಯುವ ಅತ್ಯುತ್ತಮ ರೇಷ್ಮೆಯಿಂದ ಮಾಡಲ್ಪಟ್ಟಿದೆ. ಬಟ್ಟೆಗಳಿಗೆ ವಿಶಿಷ್ಟವಾದ ಹೊಳಪು ಮತ್ತು ಭೌಗೋಳಿಕ ಸುವಾಸನೆ ನೀಡುತ್ತದೆ ಎಂದರು. 

ಕೆಎಸ್‌ಐಸಿ ಮೈಸೂರು ಸಿಲ್ಕ್‌ ಸೀರೆಗಳು ಸ್ಪರ್ಧಾತ್ಮಕ ಮಾರುಕಟ್ಟೆಯಲ್ಲಿ ಹೆಚ್ಚಾಗಿ ಮಾರಾಟವಾಗುವ ಮತ್ತು ಬೇಡಿಕೆಯಲ್ಲಿರುವ ರೇಷ್ಮೆ ಸೀರೆಗಳಾಗಿವೆ. ಅದರಲ್ಲೂ ಮಹಿಳೆಯರಿಗೆ ವಿವಾಹಗಳ ಮತ್ತು ಹಬ್ಬ ಹರಿದಿನಗಳ ಸಂದರ್ಭಗಳಲ್ಲಿ ಬಹು ಅಚ್ಚುಮೆಚ್ಚಿನ ಆಯ್ಕೆಯ ಸೀರೆ ಮೈಸೂರು ಸಿಲ್ಕ್‌ ಸೀರೆಗಳಾಗಿವೆ ಎಂದರು. 

ಸಂಸ್ಥೆಯ ವ್ಯವಸ್ಥಾಪಕ ಭಾನುಪ್ರಕಾಶ ಮಾತನಾಡಿ, ಕೆಎಸ್‌ಐಸಿಯ ಮೈಸೂರ್‌ ಸಿಲ್ಕ್‌ ಸೀರೆಗಳಿಗೆ ಭೌಗೋಳಿಕ ಗುರುತಿನ ನೋಂದಣಿ ಎಐಧಿ11 (ಎಛಿಟಜ್ಟaphಜ್ಚಿa್ಝ ಐ್ಞdಜ್ಚಿaಠಿಜಿಟ್ಞ ್ಕಛಿಜಜಿsಠ್ಟಿaಠಿಜಿಟ್ಞ) ಪಡೆದುಕೊಂಡಿದೆ. ಇದು ಸರಕುಗಳ ಭೌಗೋಳಿಕ ಗುರುತಿನ (ನೋಂದಣಿ ಮತ್ತು ಸಂರಕ್ಷ ಣೆ) ಕಾಯ್ದೆ 1999ರಲ್ಲಿ ಲೋಕಸಭೆಯಲ್ಲಿ ಅನುಮೋದನೆಗೊಂಡಿದೆ. ಈ ನೋಂದಣಿಯ ಪ್ರಕಾರ ಕೆಎಸ್‌ಐಸಿಯು ಮೈಸೂರ ಸಿಲ್ಕ್‌ನ ಏಕೈಕ ಮಾಲೀಕತ್ವ ಹೊಂದಿದೆ ಎಂದರು. 

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಬಿ.ಸಿ.ಸತೀಶ ಮತ್ತಿತರರು ಉಪಸ್ಥಿತರಿದ್ದರು. 

LEAVE A REPLY

Please enter your comment!
Please enter your name here