ಚಿಕ್ಕಬಳ್ಳಾಪುರ: ‘ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟು ಕೊಡುವುದಿಲ್ಲ. ದೇವೇಗೌಡರು ಸೇರಿದಂತೆ ಯಾರೇ ಸ್ಪರ್ಧೆ ಮಾಡಿದರೂ ನಾನಂತೂ ಸ್ಪರ್ಧಿಸುತ್ತೇನೆ’ ಎಂದು ಚಿಕ್ಕಬಳ್ಳಾಪುರ ಸಂಸದ ಎಂ.ವೀರಪ್ಪ ಮೊಯ್ಲಿ ಹೇಳಿದರು. 2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿವೆ. ಸೀಟು ಹಂಚಿಕೆ ಬಗ್ಗೆ ಉಭಯ ಪಕ್ಷಗಳು ಇನ್ನೂ ತೀರ್ಮಾನವನ್ನು ಕೈಗೊಂಡಿಲ್ಲ. ಜೆಡಿಎಸ್ ಚಿಕ್ಕಬಳ್ಳಾಪುರ ಕ್ಷೇತ್ರಕ್ಕಾಗಿ ಬೇಡಿಕೆ ಇಟ್ಟಿದೆ ಎಂದು ತಿಳಿದುಬಂದಿದೆ.

ಚಿಕ್ಕಬಳ್ಳಾಪುರ ಕ್ಷೇತ್ರದ ಹಾಲಿ ಸಂಸದ ಎಂ.ವೀರಪ್ಪ ಮೊಯ್ಲಿ. ಜೆಡಿಎಸ್‌ಗೆ ಕ್ಷೇತ್ರವನ್ನು ಬಿಟ್ಟುಕೊಡುವ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ‘ಚಿಕ್ಕಬಳ್ಳಾಪುರ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ’ ಎಂದು ಸ್ಪಷ್ಟಪಡಿಸಿದರು.

2014ರ ಲೋಕಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿಯಿಂದ ಬಿ.ಎನ್.ಬಚ್ಚೇಗೌಡ ಅಭ್ಯರ್ಥಿಯಾಗಿದ್ದರು. ಜೆಡಿಎಸ್‌ನಿಂದ ಎಚ್.ಡಿ.ಕುಮಾರಸ್ವಾಮಿ ಕಣಕ್ಕಿಳಿದಿದ್ದರು. ಆದರೆ, ಈ ಬಾರಿ ಯಾರು ಅಭ್ಯರ್ಥಿಯಾಗಲಿದ್ದಾರೆ? ಎಂದು ಕಾದು ನೋಡಬೇಕಿದೆ….

ವೀರಪ್ಪ ಮೊಯ್ಲಿ ಹೇಳಿದ್ದೇನು? ‘ದೇವೇಗೌಡರು ಸೇರಿದಂತೆ ಯಾರೂ ಸ್ಪರ್ಧೆ ಮಾಡಿದರೂ ನಾನಂತೂ ಸ್ಪರ್ಧಿಸುತ್ತೇನೆ. ಜೆಡಿಎಸ್‌ಗೆ ನಿಗದಿತ ಸ್ಥಾನಗಳು ಇರುವುದರಿಂದ ಚಿಕ್ಕಬಳ್ಳಾಪುರ ಕ್ಷೇತ್ರದ ಮೇಲೆ ಮನಸ್ಸಿರಬಹುದು. ಪ್ರಯತ್ನಗಳೂ ನಡೆಯಬಹುದು. ಅದರ ಬಗ್ಗೆ ನಮ್ಮೊಂದಿಗೆ ಮಾತನಾಡಿಲ್ಲ’ ಎಂದು ವೀರಪ್ಪ ಮೊಯ್ಲಿ ಸ್ಪಷ್ಟಪಡಿಸಿದರು.

ಹಾಲಿ ಕ್ಷೇತ್ರವನ್ನು ಬಿಟ್ಟು ಕೊಡುವುದಿಲ್ಲ ‘ಚಿಕ್ಕಬಳ್ಳಾಪುರ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡುವ ಪ್ರಶ್ನೆಯೇ ಬರುವುದಿಲ್ಲ. ಹಾಲಿ ಸಂಸದರು ಇರುವ ಕ್ಷೇತ್ರವನ್ನು ಕಾಂಗ್ರೆಸ್ ಬಿಟ್ಟು ಕೊಡುವ ಪ್ರಶ್ನೆಯೇ ಬರುವುದಿಲ್ಲ’ ಎಂದು ಎಂ.ವೀರಪ್ಪ ಮೊಯ್ಲಿ ಅವರು ಸ್ಪಷ್ಟಪಡಿಸಿದರು.

ಕೋಲಾರ, ಚಿಕ್ಕಬಳ್ಳಾಪುರಕ್ಕೆ ಬೇಡಿಕೆ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಜೆಡಿಎಸ್ ಲೋಕಸಭಾ ಚುನಾವಣೆಯನ್ನು ಎದುರಿಸಲಿದೆ. ಕೋಲಾರ ಮತ್ತು ಚಿಕ್ಕಬಳ್ಳಾಪುರ ಕ್ಷೇತ್ರಕ್ಕಾಗಿ ಪಕ್ಷ ಬೇಡಿಕೆ ಇಟ್ಟಿದೆ ಎಂದು ತಿಳಿದುಬಂದಿದೆ. ಜನವರಿ 14ರ ನಂತರ ಕಾಂಗ್ರೆಸ್ ಜೆಡಿಎಸ್ ನಾಯಕರ ಸಭೆ ನಡೆಯಲಿದ್ದು, ಸೀಟು ಹಂಚಿಕೆ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ.

ಎಚ್.ಡಿ.ಕುಮಾರಸ್ವಾಮಿ ಕಣಕ್ಕಿಳಿದಿದ್ದರು 2014ರ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಎಚ್.ಡಿ.ಕುಮಾರಸ್ವಾಮಿ ಅವರು ಜೆಡಿಎಸ್ ಅಭ್ಯರ್ಥಿಯಾಗಿದ್ದರು. 346339 ಮತಗಳನ್ನು ಪಡೆದು 3ನೇ ಸ್ಥಾನ ಪಡೆದಿದ್ದರು. ಈ ಬಾರಿಯೂ ಜೆಡಿಎಸ್‌ ಕ್ಷೇತ್ರಕ್ಕಾಗಿ ಬೇಡಿಕೆ ಇಡುತ್ತಿದೆ.

2014ರ ಫಲಿತಾಂಶ 2014ರ ಲೋಕಸಭಾ ಚುನಾವಣೆಯಲ್ಲಿ ಎಂ.ವೀರಪ್ಪ ಮೊಯ್ಲಿ ಅವರು 424800 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಬಿಜೆಪಿಯ ಬಿ.ಎನ್.ಬಚ್ಚೇಗೌಡ ಅವರು 415280 ಮತಗಳನ್ನು ಪಡೆದಿದ್ದರು. ಜೆಡಿಎಸ್‌ನಿಂ ಎಚ್.ಡಿ.ಕುಮಾರಸ್ವಾಮಿ ಕಣಕ್ಕಿಳಿದಿದ್ದು 346339 ಮತಗಳನ್ನು ಪಡೆದಿದ್ದರು.

Summary
'ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟು ಕೊಡುವುದಿಲ್ಲ.
Article Name
'ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟು ಕೊಡುವುದಿಲ್ಲ.
Description
ಚಿಕ್ಕಬಳ್ಳಾಪುರ: 'ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟು ಕೊಡುವುದಿಲ್ಲ. ದೇವೇಗೌಡರು ಸೇರಿದಂತೆ ಯಾರೇ ಸ್ಪರ್ಧೆ ಮಾಡಿದರೂ ನಾನಂತೂ ಸ್ಪರ್ಧಿಸುತ್ತೇನೆ' ಎಂದು ಚಿಕ್ಕಬಳ್ಳಾಪುರ ಸಂಸದ ಎಂ.ವೀರಪ್ಪ ಮೊಯ್ಲಿ ಹೇಳಿದರು. 2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿವೆ. ಸೀಟು ಹಂಚಿಕೆ ಬಗ್ಗೆ ಉಭಯ ಪಕ್ಷಗಳು ಇನ್ನೂ ತೀರ್ಮಾನವನ್ನು ಕೈಗೊಂಡಿಲ್ಲ. ಜೆಡಿಎಸ್ ಚಿಕ್ಕಬಳ್ಳಾಪುರ ಕ್ಷೇತ್ರಕ್ಕಾಗಿ ಬೇಡಿಕೆ ಇಟ್ಟಿದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here