ಟಿಪ್ಪು ಜಯಂತಿಗೆ ಹೆಚ್.ಡಿ ದೇವೇಗೌಡರನ್ನು ಆಹ್ವಾನಿಸಿದ ಜಮೀರ್ ಅಹ್ಮದ್

0
5
views

ಬೆಂಗಳೂರು : ನವೆಂಬರ್ 10 ರಂದು ಟಿಪ್ಪು ಜಯಂತಿ ಆಚರಣೆಯನ್ನು ವಿಧಾನಸೌಧದ ಬ್ಯಾಕ್ವೆಂಟ್ ಹಾಲ್ ನಲ್ಲಿಯೇ ಮಾಡಲಾಗುವುದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರನ್ನು ಭೇಟಿ ಮಾಡಿ ಟಿಪ್ಪು ಜಯಂತಿಯನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿ ಮಾತನಾಡಿದ ಜಮೀರ್ ಅಹ್ಮದ್, ಕಾರ್ಯಕ್ರಮದಲ್ಲಿ ಗೊಂದಲ ಉಂಟಾಗದಂತೆ ಭಾಗವಹಿಸುವವರ ಸಂಖ್ಯೆಯನ್ನು ಸೀಮಿತಗೊಳಿಸಲಾಗಿದೆ. ಎರಡು ಸಾವಿರ ಟಿಕೆಟ್ ಮಾತ್ರ ಮುದ್ರಿಸುತ್ತಿದ್ದು, ಟಿಕೆಟ್ ಇದ್ದವರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗುವುದು ಎಂದು ತಿಳಿಸಿದರು.

ಬಿಜೆಪಿ ಅವರು ಟಿಪ್ಪು ಜಯಂತಿ ವಿಚಾರದಲ್ಲಿ ರಾಜಕೀಯ ಲಾಭ ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಬಿ.ಎಸ್. ಯಡಿಯೂರಪ್ಪ ಅವರೇ ಹಿಂದೆ ಟಿಪ್ಪು ಜಯಂತಿ ಆಚರಣೆ ಮಾಡಿದ್ದರು. ಈಗ ರಾಜಕೀಯಕ್ಕಾಗಿ ವಿರೋಧ ಮಾಡುತ್ತಿದ್ದಾರೆ. ಅದಕ್ಕೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here