ದೆಹಲಿಯಲ್ಲಿ ರೈತರ ಮೇಲೆ ನಡೆದ ಲಾಠಿ ಚಾರ್ಜ್​ ಖಂಡಿಸಿ ರೈತ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಸಂಗೊಳ್ಳಿ ರಾಯಣ್ಣ ವೃತದಲ್ಲಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ರೈತರು, ದೆಹಲಿ ಪೊಲೀಸ್ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿಯವರ ಪ್ರತಿಕೃತಿ ದಹಿಸಲಾಯಿತು. ಕೇಂದ್ರ ಸರ್ಕಾರ ಈ ಹಿಂದೆ ಅಧಿಕಾರಕ್ಕೆ ಬರುವ ಮುಂಚೆ ರೈತರಿಗೆ ಹಲವು ಸೌಲಭ್ಯಗಳನ್ನು ನೀಡುವುದಾಗಿ ಹೇಳಿತ್ತು. ಆದ್ರೆ ಈಗ ಪೊಲೀಸರ ಮೂಲಕ ರೈತರ ಮೇಲೆ ದೌರ್ಜನ್ಯ ನಡೆಸುತ್ತಿದೆ ಎಂದು ಆರೋಪಿಸಿದರು.
ಅಲ್ಲದೆ, ಸಾಲಾ ಮನ್ನಾ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ಮಾಡುವ ರೈತರ ಮೇಲೆ ಫಿರಂಗಿಗಳನ್ನು ಸಿಡಿಸಿ ದೌರ್ಜನ್ಯ ಮಾಡಲಾಗಿದೆ ಎಂದು ದೂರಿದರು. ಕೂಡಲೇ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ರೈತರ ಮೇಲೆ ದೌರ್ಜನ್ಯ ನಡೆಸಿದ ದೆಹಲಿ ಪೊಲೀಸರ ಮೇಲೆ ಶಿಸ್ತು ಕ್ರಮ ಜರುಗಿಸಬೇಕು ಹಾಗೂ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಎಂದು ಅಗ್ರಹಿಸಿದರು.

LEAVE A REPLY

Please enter your comment!
Please enter your name here