ಬೆಂಗಳೂರು : ನಟ ವಿನೋದ್ ರಾಜ್ ಗೆ ಯಾಮಾರಿಸಿ 1 ಲಕ್ಷ ರೂ. ದೋಚಿದ್ದ ಆರೋಪಿಯನ್ನು ನೆಲಮಂಗಲ ಪೊಲೀಸರು ಬಂಧಿಸಿದ್ದಾರೆ.

ಓಜಿಕುಪ್ಪಂ ಮೂಲದ ರಾಜು ಅಲಿಯಾಸ್ ಹೈಟೆಕ್ ರಾಜ ಬಂಧಿತ ಆರೋಪಿ. ಒಂದು ತಿಂಗಳ ಹಿಂದೆ ನಗರದ ಹೊರವಲಯದ ನೆಲಮಂಗಲದಲ್ಲಿ ಅಭಿಮಾನಿಯ ಸೋಗಿನಲ್ಲಿ ಬಂದ ಹೈಟೆಕ್ ರಾಜ, ನಟ ವಿನೋದ್ ರಾಜ್ ಕಾರಿನಲ್ಲಿದ್ದ 1 ಲಕ್ಷ ರೂ. ಹಣವನ್ನು ಎಗರಿಸಿ ಪರಾರಿಯಾಗಿದ್ದ. ಈ ಸಂಬಂಧ ನೆಲಮಂಗಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಸಿಪಿಐ ಅನಿಲ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಸದ್ಯ ಆರೋಪಿಯನ್ನು ಬಂಧಿಸಲಾಗಿದೆ.

LEAVE A REPLY

Please enter your comment!
Please enter your name here