ಬೆಂಗಳೂರು: ನಗರದ ಕೆ.ಆರ್.ಪುರ ಮೆಟ್ರೋ ಕಾಮಗಾರಿ ವೇಳೆ ಅವಘಡವೊಂದು ಸಂಭವಿಸಿದೆ. ಡ್ರಿಲ್ಲಿಂಗ್ ಮಾಡುವಾಗ ಗ್ಯಾಸ್ ಪೈಲ್ ಲೈನ್ ಒಡೆದಿದ್ದು, ಈ ವೇಳೆ ಗ್ಯಾಸ್ ಸೋರಿಯಾಗಿ ಆತಂಕದ ವಾತಾವರಣ ನಿರ್ಮಾಣಗೊಂಡಿರುವ ಘಟನೆ ಸೋಮವಾರ ನಡೆದಿದೆ.

ಮಹದೇವಪುರ ಬಳಿಯ ಗರುಡಾಚಾರ್ ಪಾಳ್ಯದಲ್ಲಿ ಈ ಅವಘಡ ಸಂಭವಿಸಿದೆ. ಮೆಟ್ರೋ ಕಾಮಗಾರಿ ವೇಳೆ ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಡ್ರಿಲ್ಲಿಂಗ್ ಮಾಡುವಾಗ ಅಲ್ಲಿದ್ದ 70 ಕಿಲೋ ಫೋರ್ಸ್’ನ ಗ್ಯಾಸ್ ಪೈಪ್ ಲೈನ್ ಸೋರಿಕೆಯಾಗಿದೆ.

ಅನಿಲ ಸೋರಿಯಾದ ಪರಿಣಾಮ ಸ್ಥಳದಲ್ಲಿ ಕೆಲ ಕಾಲ ಆತಂಕದ ವಾತಾರಣ ಸೃಷ್ಟಿಯಾಗಿದೆ. ಇದರಂತೆ ಐಟಿಪಿಎಲ್ ಪ್ರಮುಖ ರಸ್ತೆಯಲ್ಲಿ ಕೆಲ ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತಗೊಂಡಿದೆ. ಬಳಿಕ ಎಚ್ಚೆತ್ತ ಅಧಿಕಾರಿಗಳು ಸುತ್ತಮುತ್ತ ಮೊಬೈಲ್ ಫೋನ್ ಗಳನ್ನು ನಿಷೇಧಿಸಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಗ್ಯಾಸ್ ಸೋರಿಕೆಯನ್ನು ತಡೆಯಲು ಹರಸಾಹಸ ಪಟ್ಟಿದ್ದಾರೆ. ಕೆಲ ಗಂಟೆಗಳ ಬಳಿಕ ಗ್ಯಾಸ್ ಸೋರಿಕೆ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆಂದು ವರದಿಗಳು ತಿಳಿಸಿವೆ.

LEAVE A REPLY

Please enter your comment!
Please enter your name here