ಮೈಸೂರು: ಬೆಂಗಳೂರು ದಕ್ಷಿಣ ತಾಲ್ಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯನ್ನು ರಾಜ್ಯ ಸರ್ಕಾರ ನಿಲ್ಲಸಬೇಕು ಎಂದು ಒತ್ತಾಯಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯಿಂದ ಮೈಸೂರಿನಿಂದ ಬೆಂಗಳೂರು ವಿಧಾನಸೌಧದ ವರೆಗೆ ಪಾದಯಾತ್ರೆ ಆರಂಭಿಸಲಾಯಿತು.
ಅಕ್ರಮ ಗಣಿಗಾರಿಕೆ ಸ್ಫೋಟದಿಂದಾಗಿ ಮಂಚನಬೆಲೆ, ತಿಪ್ಪಗೊಂಡನಹಳ್ಳಿ ಜಲಾಶಯಕ್ಕೆ ಹಾನಿಯಾಗುವ ಹೊತೆಗೆ ಇಸ್ರೊಗೂ ಮತ್ತು ಬಾಂಬೆಯಿಂದ ಬಿಡದಿವರೆಗೆ ಹಾದು ಹೋಗಿರುವ ಗ್ಯಾಸ್‍ಲೈನ್ ಸಂಪರ್ಕಕ್ಕೆ ಹಾನಿಯಾಗಲಿದೆ.ಅಲ್ಲದೇ ನೂರಾರು ಹಳ್ಳಿಗಳಿಗೆ ಅಪಾರನಷ್ಟ ಉಂಟಾಗಲಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರು ದಕ್ಷಿಣ ತಾಲ್ಲೂಕಿನ ತಾವರೆಕೆರೆ ಹೋಬಳಿಗೆ ಸೇರಿರುವ ಚಿಕ್ಕನಹಳ್ಳಿ, ಅಜ್ಜನಹಳ್ಳಿ ಹಾಗೂ ಚುಚ್ಚನಕುಪ್ಪೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿನ ಮನೆಗಳು ಬಿರುಕು ಬಿಟ್ಟಿದ್ದು, ಕಲುಷಿತ ಗಾಳಿ ನೀರಿನಿಂದ ಗ್ರಾಮಸ್ಥರು ಹಾಗೂ ಜಾನುವಾರುಗಳು ಅನಾರೋಗ್ಯದಿಂದ ನರಳುವಂತಾಗಿದೆ. 5ಎಕರೆಗೆ ಅನುಮತಿ ಪಡೆದು 20 ಎಕರೆ ಪ್ರದೇಶದಲ್ಲಿ ಗಣಿಗಾರಿಕೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಕಸ್ತೂರಿ ಕರ್ನಾಟಕ ಜನಪರ ವೇದಿಕೆ ರಾಜ್ಯಾಧ್ಯಕ್ಷ ರಮೇಶ್‍ಗೌಡ ಮಾಧ್ಯಮಗಳೊಂದಿಗೆ ಮಾತನಾಡಿ, ಅಕ್ರಮ ಗಣಿಗಾರಿಕೆ ನಿಲ್ಲಿಸದೇ ಹೋದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

LEAVE A REPLY

Please enter your comment!
Please enter your name here