ಹುಬ್ಬಳ್ಳಿ

ಉತ್ತರ ಕರ್ನಾಟಕ ಹೋರಾಟ ಸಮಿತಿ, ಸಮಾನ ಮನಸ್ಕರ ಸಂಘಟನೆಗಳ ಸಹಯೋಗದಲ್ಲಿ ಡಿ ೧೫ ರಂದು ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಪ್ರತ್ಯೇಕ ರಾಜ್ಯದ ಧ್ವಜಾರೋಹಣವನ್ನು ಮತ್ತು ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಪ್ರತಿಭಟನೆ ಮಾಡಲಾಗುವುದು ಎಂದು ನಾಗೇಶ ಬೋಳಶೆಟ್ಟಿ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಕಳೆದ ಜುಲೈ ೩೧ ರಲ್ಲಿ ಬೆಳಗಾವಿ ಸುವರ್ಣಸೌಧದ ಎದುರು ಉತ್ತರ ಕರ್ನಾಟಕ ಭಾಗದ ಮಠಾಧೀಶರು ಧರಣಿ ಮಾಡಿದ್ದರು, ಈ ಹೋರಾಟದಲ್ಲಿ ನಿಡಸೋಶಿ ಮಠದ ಜಗದ್ಗುರು ಪಂಚಮಶಿವಲಿಂಗೇಶ್ವರ ಮಹಾಸ್ವಾಮಿಗಳು, ನಾಗನೂರು ರುದ್ರಾಕ್ಷಿಮಠದ ಸಿದ್ದರಾಮೇಶ್ವರ ಸ್ವಾಮಿಗಳು, ಹುಕ್ಕೇರಿಯ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ವಹಿಸಿಕೊಂಡಿದ್ದರು. ಒಂದು ನಿರ್ಣಯ ತೆಗೆದುಕೊಂಡು ಸ್ವತಃ ಸ್ವಾಮಿಜಿಗಳೇ ಮುಂದೆ ನಿಂತು ಪ್ರತ್ಯೇಕ ರಾಜ್ಯ ಧ್ವಜಾರೋಹಣ ಮಾಡಿ ಪ್ರತ್ಯೇಕ ರಾಜ್ಯಕ್ಕೆ ಚಾಲನೆ ನೀಡಲು ತಿರ್ಮಾಣಿಸಲಾಗಿದೆ. ಮಠಾಧೀಶರ ಅಭಿಮತದ ಮೇರಗೆ ಗಡುವು ನೀಡಲಾಗಿದ್ದು ಸದ್ಯ ೪ ತಿಂಗಳು ಕಳೆದರೂ ಯಾವುದೇ ಒಂದು ಕಚೇರಿ ಸ್ಥಳಾಂತರವಾಗಿಲ್ಲ. ಹೀಗಾಗಿ ಡಿ.೧೫ ರಂದು ಪ್ರತ್ಯೇಕ ರಾಜ್ಯದ ಧ್ವಜ ಹಾರಿಸಲು ನಿಶ್ಚಯಿಸಲಾಗಿದೆ ಅಂದು ಉತ್ತರ ಕರ್ನಾಟಕದ ೧೩ ಜಿಲ್ಲೆಗಳ ಹೋರಾಟಗಾರರು, ಪದಾಧಿಕಾರಿಗಳು ಭಾಗವಹಿಸುವರು ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಉತ್ತರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಲಕ್ಷ್ಮಣ ಬಕಾಯಿ, ಈರಣ್ಣಾ ಎಮ್ಮಿ, ಉತ್ತರ ಕರ್ನಾಟಕ ಹೋರಾಟ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರೀಫ ಅಮ್ಮಿನಬಾವಿ ಇದ್ದರು.

LEAVE A REPLY

Please enter your comment!
Please enter your name here