ಪಿರಿಯಾಪಟ್ಟಣ :  ಬೀದಿಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ವತಿಯಿಂದ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಹನಗೋಡು ಗ್ರಾಮದಲ್ಲಿ ಹೋಬಳಿ ಮಟ್ಟದ ಬೀದಿಬದಿ ವ್ಯಾಪಾರಿ ಸಂಘಟನೆಯನ್ನು ರಚಿಸಲಾಯಿತು. ಈ ಕುರಿತು ಮಾಧ್ಯಮದೊಂದಿಗೆ ಮಾತನಾಡಿದ ಕರ್ನಾಟಕ ಬೀದಿಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ರಾಜ್ಯ ಸಹಸಂಚಾಲಕ ಹಾಗೂ ಕರ್ನಾಟಕ ಮಾನವ ಹಕ್ಕುಗಳ ಜನ ಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ಎನ್. ಗುರುಸ್ವಾಮಿ ಇತ್ತೀಚಿಗೆ ರಾಜ್ಯಾದ್ಯಂತ ಸಂಘಟನೆಯ ರಾಜ್ಯಾಧ್ಯಕ್ಷರಾದ ರಂಗಸ್ವಾಮಿ ಹಾಗೂ ಕಾರ್ಯದರ್ಶಿಯಾದ ಅನ್ವರ್ ಶಿರಹಟ್ಟಿ ಅವರ ನೇತೃತ್ವದಲ್ಲಿ ಬೀದಿಬದಿ ವ್ಯಾಪಾರಿಗಳನ್ನು ಉತ್ತಮ ರೀತಿಯಲ್ಲಿ ಸಂಘಟಿಸುತ್ತಿದ್ದು ರಾಜ್ಯ ಸರ್ಕಾರದಿಂದ ಹಲವು ಮಹತ್ತರವಾದ ಯೋಜನೆಗಳು ಜಾರಿಗೆ ಬಂದಿದ್ದು ” ಬಡವರ ಬಂಧು ” ಎಂಬ ಯೋಜನೆಯ ಫಲಾನುಭವಿಯಾಗಲು ಬೀದಿಬದಿ ವ್ಯಾಪಾರಿಗಳು ಕಡ್ಡಾಯವಾಗಿ ಗುರುತಿನ ಚೀಟಿ ಹಾಗೂ ಪ್ರಮಾಣಪತ್ರವನ್ನು ಹೊಂದಬೇಕಾಗಿದ್ದು ಅನಿವಾರ್ಯವಾಗಿದೆ.

ಆ ನಿಟ್ಟಿನಲ್ಲಿ ಪ್ರತಿ ಬೀದಿಬದಿ ವ್ಯಾಪಾರಿಗಳು ಕೂಡ ತಮ್ಮ ವ್ಯಾಪಾರದ ಪರಿಮಿತಿಯಲ್ಲಿ ಇರುವ ಗ್ರಾಮ ಪಂಚಾಯಿತಿ. ಪಟ್ಟಣ ಪಂಚಾಯಿತಿ ನಗರಸಭೆ ಗಳಲ್ಲಿ ಅರ್ಜಿ ಸಲ್ಲಿಸಿ ಪ್ರಮಾಣ ಪತ್ರ ಹಾಗೂ ಗುರುತಿನ ಚೀಟಿ ಪಡೆದಿದ್ದೆ ಆದಲ್ಲಿ ಸರ್ಕಾರದ ಸೌಲಭ್ಯಗಳನ್ನು ಪಡೆಯಬಹುದಾಗಿದೆ. ಆ ನಿಟ್ಟಿನಲ್ಲಿ ಬೀದಿಬದಿ ವ್ಯಾಪಾರಿಗಳು ಸಂಘಟಿತರಾಗಿ ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಬೇಕೆಂದು ಕಿವಿಮಾತು ಹೇಳಿದರು. ನಂತರ ಒಕ್ಕೂಟದ ಕೊಡಗು ಹಾಗೂ ಹಾಸನ ಜಿಲ್ಲಾ ಘಟಕದ ಅಧ್ಯಕ್ಷರಾದ ಕೆ ಆರ್ ಜಗದೀಶ್ ಮಾತನಾಡಿ ರಾಜ್ಯ ಘಟಕದ ಅಧ್ಯಕ್ಷರಾದ ರಂಗಸ್ವಾಮಿ ಹಾಗೂ ಕಾರ್ಯದರ್ಶಿಯಾದ ಅನ್ವರ್ ಶಿರಹಟ್ಟಿ ಅವರ ನೇತೃತ್ವದ ಬೀದಿ ಬದಿ ವ್ಯಾಪಾರ ಸಂಘಟನೆಯು ಉತ್ತಮ ರೀತಿಯಲ್ಲಿ ಸಂಘಟಿತ ವಾಗುತ್ತಿತ್ತು ಬೀದಿಬದಿ ವ್ಯಾಪಾರಿಗಳು ಕೇವಲ ಅಲ್ಪ ವಿದ್ಯಾಭ್ಯಾಸದಿಂದ ತಮ್ಮ ವೃತ್ತಿಜೀವನವನ್ನು ಆರಂಭಿಸಿದ್ದಾರೆ.

ಬೀದಿ ಬದಿಯಲ್ಲಿ ವ್ಯಾಪಾರ ಮಾಡುತ್ತಿರುವ ವ್ಯಾಪಾರಿಗಳು ಸರ್ಕಾರದ ಇತರೆ ಸೌಲಭ್ಯಗಳಿಂದ ವಂಚಿತರಾಗಿರುವುದು ಕಂಡುಬಂದಿದೆ. ಆ ನಿಟ್ಟಿನಲ್ಲಿ ಬೀದಿಬದಿ ವ್ಯಾಪಾರಿಗಳು ಸಂಘಟಿತರಾಗಿ ತಮ್ಮ ತಮ್ಮ ಸೌಲಭ್ಯಗಳನ್ನು ಪಡೆದುಕೊಳ್ಳುವುಲ್ಲಿ ಮುಂದಾಗಬೇಕೆಂದು ಆ ನಿಟ್ಟಿನಲ್ಲಿ ರಾಜ್ಯದ ವಿವಿಧ ಜಿಲ್ಲೆಯ ವಿವಿಧ ತಾಲೂಕುಗಳು ಹಾಗೂ ಹೋಬಳಿ ಗ್ರಾಮ ಮಟ್ಟದಲ್ಲಿ ಬೀದಿ ಬದಿ ವ್ಯಾಪಾರಸ್ಥರನ್ನು ಸಂಘಟಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತಿದೆ. ಎಂದು ಇದೇ ಸಂದರ್ಭ ತಿಳಿಸಿದರು. ನಂತರ ಅನಗೋಡು ಕ್ಷೇತ್ರದ ಜಿಲ್ಲಾ ಪಂಚಾಯಿತಿ ಸದಸ್ಯ ಕಾಟ ನಾಯಕ ಮಾತನಾಡಿ ನನ್ನ ಕ್ಷೇತ್ರದ ವ್ಯಾಪ್ತಿಗೆ ಒಳಪಡುವಂತಹ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ವ್ಯಾಪಾರ ಮಾಡುವ ಪ್ರತಿ ಬೀದಿಬದಿ ವ್ಯಾಪಾರಿಗಳಿಗೆ ಗ್ರಾಮ ಪಂಚಾಯಿತಿಯ ವತಿಯಿಂದ ಗುರುತಿನ ಚೀಟಿ ಹಾಗೂ ಪ್ರಮಾಣಪತ್ರವನ್ನು ದೊರಕಿಸಿಕೊಡುವ ನಿಟ್ಟಿನಲ್ಲಿ ಬೀದಿಬದಿ ವ್ಯಾಪಾರಿಗಳು ಉತ್ತಮ ರೀತಿಯಲ್ಲಿ ಬದುಕು ಕಟ್ಟಿಕೊಳ್ಳಲು ಸಹಕರಿಸುವುದಾಗಿ ಇದೇ ಸಂದರ್ಭ ತಿಳಿಸಿದರು.

ಈ ಸಂದರ್ಭ ಹನಗೋಡು ಹೋಬಳಿ ಘಟಕದ ನೂತನ ಅಧ್ಯಕ್ಷರಾಗಿ ಅಸ್ಲಾಂ ಪಾಶ ಹಾಗೂ ಕಾರ್ಯದರ್ಶಿಯಾಗಿ ರಾಘವೇಂದ್ರ ರವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕರ್ನಾಟಕ ಮಾನವ ಹಕ್ಕುಗಳ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಆರ್ ಗಿರೀಶ್. ಸಹಕಾರ್ಯದರ್ಶಿ ಮಹಮದ್ ಶಬೀರ್. ಜಿಲ್ಲಾ ಮಾಧ್ಯಮ ಸಲಹೆಗಾರ ಕೆ ಟಿ ಶ್ರೀನಿವಾಸ್. ಸೇರಿದಂತೆ ಇನ್ನಿತರರು ಈ ಸಂದರ್ಭ ಹಾಜರಿದ್ದರು.

LEAVE A REPLY

Please enter your comment!
Please enter your name here