ಮುಂಬೈ: ಜೈಲುಪಾಲಾದ ಪತಿಯನ್ನು ಜೈಲಿನಿಂದ ಬಿಡುಗಡೆ ಮಾಡಿಸಲು ಸಹಾಯ ಮಾಡುವುದಾಗಿ ಹೇಳಿ ಮಹಿಳೆಯ ಮೇಲೆ ವ್ಯಕ್ತಿಯೊಬ್ಬ ನಿರಂತರ ಅತ್ಯಾಚಾರ ಎಸಗಿ, ಅದರ ವಿಡಿಯೋ ಮೂಲಕ ಬೆದರಿಕೆ ಹಾಕಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಮಹಾರಾಷ್ಟ್ರದ ಬಾರಾಮತಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಆರೋಪಿ ವಿರುದ್ಧ ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪಿಯನ್ನು ಮಚ್ಚಿಂದ್ರ ಶಂಕರ್ ಟಿಂಗ್ರೆ ಎಂದು ಗುರುತಿಸಲಾಗಿದೆ. ಈತ ಸಂತ್ರಸ್ತೆಯ ಮೇಲೆ ಅತ್ಯಾಚಾರ ಎಸಗಿದ್ದು, ಆಕೆಯ ನಗ್ನ ಫೋಟೋ ಮತ್ತು ವಿಡಿಯೋಗಳನ್ನು ತೆಗೆದುಕೊಂಡಿದ್ದಾನೆ ಎನ್ನಲಾಗಿದೆ. ಅಷ್ಟೇ ಅಲ್ಲದೇ ಬೆತ್ತಲೆ ಫೋಟೋ ಮತ್ತು ವಿಡಿಯೋಗಳನ್ನು ಇಟ್ಟುಕೊಂಡು ಹಣಕ್ಕಾಗಿ ಬೆದರಿಸಿದ್ದು, ಒಂದು ವೇಳೆ ಹಣ ಕೊಡದಿದ್ದರೆ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಮತ್ತು ವಿಡಿಯೋಗಳನ್ನು ಅಪ್ಲೋಡ್ ಮಾಡಿ ವೈರಲ್ ಮಾಡುವುದಾಗಿ ಬೆದರಿಕೆ ಒಡ್ಡಿದ್ದಾನೆ.

ಪೊಲೀಸ್ ಮೂಲಗಳು ತಿಳಿಸಿರುವಂತೆ, ಸಂತ್ರಸ್ತೆಯ ಪತಿ, ತಂದೆ ಮತ್ತು ಸಹೋದರಿಯು ಕೊಲೆಯ ಆರೋಪದ ಮೇಲೆ ಜೈಲು ಶಿಕ್ಷೆಗೆ ಒಳಗಾಗಿದ್ದು. ಆರೋಪಿ ಟಿಂಗ್ರೆ ಸಂತ್ರಸ್ತೆಗೆ ಪತಿಯನ್ನು ಜೈಲಿನಿಂದ ಬಿಡುಗಡೆ ಮಾಡಲು ಸಹಾಯ ಮಾಡುತ್ತೇನೆ ಎಂದು ಪ್ರಮಾಣ ಮಾಡಿದ್ದ ಎಂದು ಸಂತ್ರಸ್ಥೆ ತಿಳಿಸಿದ್ದಾರೆ. ಪತಿಯನ್ನು ಜೈಲಿನಿಂದ ಬಿಡಿಸುತ್ತಾನೆಂದು ನಂಬಿದ್ದ ಸಂತ್ರಸ್ತೆಯು ಆತನ ಬಲವಂತಕ್ಕೆ ಒಳಗಾಗಿ ಆತನಿಂದ ಅತ್ಯಾಚಾರಕ್ಕೊಳಗಾಗಿದ್ದಾರೆ.
ಬಳಿಕ ಅತ್ಯಾಚಾರ ನಂತರ ಈ ಬಗ್ಗೆ ಯಾರಿಗಾದರೂ ಹೇಳಿದರೆ ನಿನ್ನನ್ನು ಮತ್ತು ನಿನ್ನ ಮಗನನ್ನು ಕೊಲೆ ಮಾಡುವುದಾಗಿ ಆರೋಪಿ ಬೆದರಿಕೆ ಹಾಕಿದ್ದಾನೆ. ಆರೋಪಿ ಸತತ 2 ವರ್ಷಗಳಿಂದ ಪದೇ ಪದೇ ಸಂತ್ರಸ್ತೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಅಷ್ಟೇ ಅಲ್ಲದೇ ಒಂದು ವೇಳೆ ಸಂತ್ರಸ್ತೆ ಲೈಂಗಿಕ ಸಂಬಂಧವನ್ನು ಮುಂದುವರಿಸಲು ನಿರಾಕರಿಸಿದರೆ ಸಾಮಾಜಿಕ ಜಾಲತಾಣಗಳಲ್ಲಿ ಆಕೆಯ ನಗ್ನ ಫೋಟೋ, ವೀಡಿಯೊಗಳನ್ನು ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
10 ದಿನಗಳ ದಿನಗಳ ನಂತರ ಮಹಿಳೆಯ ಸ್ನೇಹಿತರು ನಿನ್ನ ಬೆತ್ತಲೆ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ ಎಂದು ತಿಳಿಸಿದ್ದಾರೆ. ಆಗ ಆರೋಪಿ ತನ್ನ ಫೋಟೋಗಳನ್ನು ಅಪ್ಲೋಡ್ ಮಾಡಿದ್ದಾನೆ ಎಂದು ತಿಳಿದು ಸಂತ್ರಸ್ಥೆ ಕೂಡಲೇ ಪೊಲೀಸರಿಗೆ ದೂರು ನೀಡಿದ್ದಾರೆ.

LEAVE A REPLY

Please enter your comment!
Please enter your name here