ಬೆಳಗಾವಿ 

ಮಹಿಳಾ ಸಬಲೀಕರಣ ಸೇರಿದಂತೆ ಸಾಮಾಜಿಕ ಜಾಗೃತಿಗಾಗಿ ಕೆಎಸ್‌ಆರ್‌ಪಿ ಪೊಲೀಸ್‌ ಸಿಬ್ಬಂದಿ ಹಮ್ಮಿಕೊಂಡಿರುವ ಬೆಳಗಾವಿಯಿಂದ ಬೆಂಗಳೂರುವರೆಗಿನ 540 ಕಿಮೀ ಸೈಕಲ್‌ ಜಾಥಾಕ್ಕೆ ನಗರದ ಚನ್ನಮ್ಮ ವೃತ್ತದಲ್ಲಿ ಬುಧವಾರ ಬೆಳಗ್ಗೆ ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ ಕೋರೆ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಡಾ.ಕೋರೆ, ಸಾಮಾಜಿಕ ಕಳಕಳಿಯಿಂದ ಮಹಿಳಾ ಪೊಲೀಸರು ಜನಜಾಗೃತಿ ಮೂಡಿಸಲು ಸೈಕಲ್‌ ಜಾಥಾ ನಡೆಸಿರುವುದು ಪ್ರಶಂಸನೀಯ. ಎಡಿಜಿಪಿ ಭಾಸ್ಕರ್‌ರಾವ್‌ ಅವರು ತಮ್ಮ ಇಲಾಖೆಯ ಕರ್ತವ್ಯ ನಿಭಾಯಿಸುವುದರ ಸಾಮಾಜಿಕ ಕಳಕಳಿ ತೋರಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮಹಿಳಾ ಪೊಲೀಸರು, ಮೂವರು ಮಹಿಳಾ ಐಪಿಎಸ್‌ ಅಧಿಕಾರಿಗಳು ಹಾಗೂ ನಾಲ್ವರು ಮಹಿಳಾ ಐಎಎಸ್‌ ಅಧಿಕಾರಿಗಳು ಜಾಥಾದಲ್ಲಿ ಭಾಗವಹಿಸಿದ್ದಾರೆ. ಮಹಿಳಾ ಸಬಲೀಕರಣ, ಮಹಿಳಾ ಶಿಕ್ಷ ಣ, ಪರಿಸರ ರಕ್ಷ ಣೆ, ಬಾಲ್ಯವಿವಾಹದಿಂದ ಆಗುವ ದುಷ್ಪರಿಣಾಮ, ಸ್ವಚ್ಛ ಭಾರತದ ಬಗ್ಗೆ ಸಾಮಾಜಿಕ ಜಾಗೃತಿ ಮೂಡಿಸುವ ಉದ್ದೇಶದಿಂದ ಸೈಕಲ್‌ ಜಾಥಾ ಹಮ್ಮಿಕೊಳ್ಳಲಾಗಿದೆ. ಪ್ರತಿದಿನ ಒಂದು ನೂರು ಕಿಮೀ ಕ್ರಮಿಸಿ ಹುಬ್ಬಳ್ಳಿ, ಚಿತ್ರದುರ್ಗ, ತುಮಕೂರು ಮಾರ್ಗವಾಗಿ ಡಿ.9ರಂದು ಜಾಥಾ ಬೆಂಗಳೂರು ತಲುಪಲಿದೆ. ವಿವಿಧ ಸಂಘಟನೆಗಳ ಸದಸ್ಯರೂ ಜಾಥಾದಲ್ಲಿ ಭಾಗವಹಿಸಿದ್ದಾರೆ.

ಕೆಎಸ್‌ಆರ್‌ಪಿ ಎಡಿಜಿಪಿ ಭಾಸ್ಕರ್‌ ರಾವ್‌, ಜಿಲ್ಲಾಧಿಕಾರಿ ಎಸ್‌.ಬಿ. ಬೊಮ್ಮನಹಳ್ಳಿ, ನಗರ ಪೊಲೀಸ್‌ ಆಯುಕ್ತ ಡಾ.ಡಿ.ಸಿ. ರಾಜಪ್ಪ ಮತ್ತಿತರರು ಉಪಸ್ಥಿತರಿದ್ದರು.

:

LEAVE A REPLY

Please enter your comment!
Please enter your name here