ಮಂಗಳೂರು ಅಂತರ್ ರಾಷ್ಟ್ರೀಯ ವಿಮಾಣ ನಿಲ್ದಾಣ ಸೇರಿದಂತೆ ದೇಶದ 6 ವಿಮಾಣ ನಿಲ್ದಾಣಗಳನ್ನು ಖಾಸಗೀಕರಣಗೊಳಿಸುವ ಬಗ್ಗೆ ಗುರುವಾರ ಕೇಂದ್ರ ಸಚಿವ ಸಂಪುಟ ನಿರ್ಧಾರ ಕೈಗೊಂಡಿದೆ.

ಲಕ್ನೋ, ಅಹ್ಮದಾಬಾದ್ , ಜೈಪುರ, ಮಂಗಳೂರು, ತಿರುವನಂತಪುರ ಮತ್ತು ಗುವಾಹತಿ ಖಾಸಗೀಕರಣಗೊಳ್ಳರುವ ವಿಮಾನ ನಿಲ್ದಾಣಗಳಾಗಿವೆ.

ದಿಲ್ಲಿ ಮತ್ತು ಮುಂಬೈ ವಿಮಾನ ನಿಲ್ದಾಣಗಳು ಖಾಸಗಿ ತೆಕ್ಕೆಗೆ ರವಾನೆಯಾಗಿ 12 ವರ್ಷಗಳ ಬಳಿಕ ಕೇಂದ್ರ ಸರಕಾರ ಈ ನಿರ್ಧಾರ ಕೈಗೊಂಡಿದೆ.

2006ರಲ್ಲಿ ದಿಲ್ಲಿ ಮತ್ತು ಮುಂಬೈ ವಿಮಾನ ನಿಲ್ದಾಣಗಳನ್ನು ಸಾರ್ವಜನಿಕ- ಖಾಸಗಿ ಸಹಭಾಗಿತ್ವದಲ್ಲಿ (ಪಿಪಿಪಿ) ಆಧುನೀಕರಣಗೊಳಿಸುವ ಉದ್ದೇಶಕ್ಕಾಗಿ ಖಾಸಗಿ ವಲಯಕ್ಕೆ ನೀಡಿದ ಬಳಿಕ ಈ ಎರಡೂ ನಿಲ್ದಾಣಗಳು ನಿರೀಕ್ಷೆಗೂ ಮೀರಿ ಅಭಿವೃದ್ಧಿಯನ್ನು ಸಾಧಿಸಿದೆ. ಹೀಗಾಗಿ ಮತ್ತೆ 6 ವಿಮಾನ ನಿಲ್ದಾಣಗಳನ್ನು ಖಾಸಗೀಕರಣಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here