ಕೊಡಗು

ಆರೋಗ್ಯವಂತ ಶಿಶು ಜನಿಸಬೇಕು ಎಂದರೆ ಗರ್ಭಾವಸ್ಥೆಯಲ್ಲಿರುವ ಗರ್ಭಿಣಿ ಸ್ತ್ರೀಯರು ಮತ್ತು ಹೆರಿಗೆಯ ನಂತರ ತಾಯಂದಿರು ತಮ್ಮ ಮಕ್ಕಳಲ್ಲಿ ಅಪೌಷ್ಟಿಕತೆ ಕಾಡದಂತೆ ಎಚ್ಚರಿಕೆ ವಹಿಸಬೇಕೆಂದು ಸೋಮವಾರಪೇಟೆ ತಾಲೂಕಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಭಾರ ಅಧಿಕಾರಿ ಶ್ರೀಮತಿ ಶೀಲಾ ಅವರು ಇಂದಿಲ್ಲಿ ಕಿವಿಮಾತು ಹೇಳಿದರು. ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಆರೋಗ್ಯ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಮಕ್ಕಳ ದಿನಾಚರಣೆ ಮತ್ತು ಆರೋಗ್ಯವಂತ ಶಿಶು ಪ್ರದರ್ಶನ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ಮಕ್ಕಳು ಆರೋಗ್ಯವಂತರಾಗಿ ಇದ್ದರೆ ಮಾತ್ರ ಉತ್ತಮ ಆರೋಗ್ಯವಂತ ಸಮಾಜ ನಿರ್ಮಾಣವಾಗಲು ಸಾಧ್ಯ. ಅಂತಹ ಸದೃಢ ಸಮಾಜ ನಿರ್ಮಾಣದಲ್ಲಿ ತಾಯಂದಿರ ಪಾತ್ರ ಅಮೋಘವಾಗಿದ್ದು ತಾಯಂದಿರು ಪ್ರಾಥಮಿಕ ಹಂತದಿಂದಲೇ ತಮ್ಮ ಮಕ್ಕಳ ಆರೋಗ್ಯದ ಮೇಲೆ ನಿಗಾ ವಹಿಸಬೇಕೆಂದು ಇದೇ ಸಂದರ್ಭ ತಾಯಂದಿರಿಗೆ ಕಿವಿಮಾತು ಹೇಳಿದರು.

ನಂತರ ಮಾತನಾಡಿದ ಕಾರ್ಯಕ್ರಮದ ಮುಖ್ಯ ಅತಿಥಿ ಡಾ!! ಹರೀಶ್ ಶೆಟ್ಟಿ. ಮಹಿಳಾ ಇಲಾಖೆಯ ವತಿಯಿಂದ ಇಂತಹ ಕಾರ್ಯಕ್ರಮಗಳು ಮಹಿಳೆಯರಿಗೆ ಆಗು ತಾಯಂದರಿಗೆ ಅತಿ ಹೆಚ್ಚು ಉಪಯುಕ್ತವಾಗುತ್ತದೆ. ಈಗಾಗಲೇ ಇಲಾಖೆಯಿಂದ ಅತಿ ಹೆಚ್ಚಿನ ಮಾಹಿತಿಯನ್ನು ತಾಯಂದಿರಿಗೂ ತಿಳಿದುಕೊಂಡಿದ್ದು ದೇಶದ ಮುಂದಿನ ಸತ್ಪ್ರಜೆಗಳನ್ನು ರೂಪಿಸುವಲ್ಲಿ ತಾಯಂದಿರ ಪಾತ್ರ ಬಹಳ ಮುಖ್ಯ. ಆ ನಿಟ್ಟಿನಲ್ಲಿ ತಮ್ಮ ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿಯನ್ನು ಪ್ರತಿಯೊಬ್ಬ ತಾಯಂದಿರು ವಹಿಸಬೇಕೆಂದು ಇದೇ ಸಂದರ್ಭ ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಶ್ರೀಮತಿ ಆರತಿ ಹರೀಶ್ ಶೆಟ್ಟಿ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿರ್ಮಲ. ತಾಲೂಕು ಆರೋಗ್ಯ ಮೇಲ್ವಿಚಾರಕಿ ದಮಯಂತಿ. ಮಹಿಳಾ ಸಮಾಜದ ಅಧ್ಯಕ್ಷೆ ಸೆಲೀನಾ ಡಿ. ಕುನ್ನಾ. ಸದಸ್ಯೆ ನಿರ್ಮಲಾ. ಆರೋಗ್ಯ ನಿರೀಕ್ಷಕರಾದ ಚಂದ್ರೇಶ್. ಮುಖೇಶ್. ಪಟ್ಟಣ ಪಂಚಾಯಿತಿ ಸದಸ್ಯರಾದ ಪುಟ್ಟಲಕ್ಷ್ಮಮ್ಮ ಜಯಲಕ್ಷ್ಮಮ್ಮ. ಶೀಲ ಕೃಷ್ಣಪ್ಪ. ಡ!! ಭರತ್. ಪಟ್ಟಣ ಪಂಚಾಯಿತಿಯ ಅಧಿಕಾರಿ ಸತೀಶ್. ಸೇರಿದಂತೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 7 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 8 ಆಶಾ ಕಾರ್ಯಕರ್ತೆಯರು ಗರ್ಭಿಣಿ ತಾಯಂದಿರು ಹಾಗೂ ಮಕ್ಕಳು ಮಹಿಳೆಯರು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು.

LEAVE A REPLY

Please enter your comment!
Please enter your name here