ಕೊಡಗು

ಇತ್ತೀಚಿಗೆ ಮಹಿಳೆಯರು ಸ್ವಾವಲಂಬಿಗಳಾಗಿ ತಮ್ಮ ಕಾಲ ಮೇಲೆ ತಾವು ನಿಂತು ಜೀವನ ನಡೆಸುತ್ತಿರುವುದು ತುಂಬಾ ಸಂತೋಷದ ಎಂದು ಸೋಮವಾರಪೇಟೆ ತಾಲ್ಲೂಕು ಪಂಚಾಯಿತಿ ಸದಸ್ಯ ಜಯಣ್ಣ ರವರು ತಮ್ಮ ಸಂತೋಷದ ಪಡಿಸಿದರು‌.
ಅವರು ಕೊಡಗು ಜಿಲ್ಲೆಯ ಹೆಬ್ಬಾಲೆ ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ತಾಲೂಕು ಸ್ತ್ರೀಶಕ್ತಿ ಒಕ್ಕೂಟದ ವತಿಯಿಂದ ಶ್ರಿ ಬನಶಂಕರಿ ಅಮ್ಮ ಜಾತ್ರಾ ಮಹೋತ್ಸವದ ಅಂಗವಾಗಿ ಆಯೋಜನೆ ಮಾಡಲಾಗಿದ್ದ ವಸ್ತುಪ್ರದರ್ಶನ ಮತ್ತು ಮಾರಾಟ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.


ನಂತರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ತಾಲೂಕು ಅಧಿಕಾರಿ ಶ್ರೀಮತಿ ಶೀಲಾ ಹಾಗೂ ಶಿರಂಗಾಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ ಎಸ್ ರಮೇಶ್ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಸುಮಾರು 20ಕ್ಕೂ ಅಧಿಕ ಸ್ತ್ರೀಶಕ್ತಿ ಸಂಘಗಳ ಗುಂಪುಗಳು ಈ ಮಾರಾಟ ಮೇಳದಲ್ಲಿ ತಮ್ಮ ತಮ್ಮ ಉತ್ಪನ್ನಗಳನ್ನು ಮಾರಾಟಕ್ಕೆ ಹಾಗೂ ಪ್ರದರ್ಶನಕ್ಕೆ ಇಟ್ಟಿದ್ದರು. ಈ ಸಂದರ್ಭ ರೂಪಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹರೀಶ್ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಪದ್ಮ. ಇಲ್ಲಾ ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷೆ ರೆಹನಾ. ತಾಲೂಕು ಶ್ರೀ ಶಕ್ತಿ ಒಕ್ಕೂಟದ ಅಧ್ಯಕ್ಷೆ ಸುಮತಿ. ಉಪಾಧ್ಯಕ್ಷೆ ಯಶೋಧ. ಕಾರ್ಯದರ್ಶಿ ಎಚ್ ಎಂ ಹೇಮಾ. ನಿರ್ದೇಶಕಿ ಲಲಿತಮ್ಮ ಸೇರಿದಂತೆ ಇನ್ನಿತರರು ಈ ಸಂದರ್ಭ ಹಾಜರಿದ್ದರ.

LEAVE A REPLY

Please enter your comment!
Please enter your name here