ಕೊಡಗು

98ನೇ ಜಾತ್ರಾ ಮಹೋತ್ಸವದ ಅಂಗವಾಗಿ ಕೊಡಗು ಜಿಲ್ಲೆಯ ಕುಶಾಲನಗರದ ಗುಂಡೂರಾವ್ ಬಡಾವಣೆಯ ಜಾತ್ರಾ ಮೈದಾನದಲ್ಲಿ ಇಂದು ಬೆಳಿಗ್ಗೆ ಉತ್ತಮ ರಾಸುಗಳ ಆಯ್ಕೆ ಪ್ರಕ್ರಿಯೆಯು ಜರುಗಿತು. ಈ ಆಯ್ಕೆ ಪ್ರಕ್ರಿಯೆಯಲ್ಲಿ ವಿವಿಧ ಜಾತಿಯ ಹಾಗೂ ತಳಿಯ ರಾಸುಗಳು ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಉತ್ತಮ ರಾಸುಗಳಿಗೆ ಆಯ್ಕೆಯಾಗುವ ಜೋಡಿ ಎತ್ತುಗಳಿಗೆ ವಿಶೇಷ ಬಹುಮಾನ ನೀಡಲಾಗುತ್ತದೆ. ಸುಮಾರು 70ಕ್ಕೂ ಅಧಿಕ ಜೋಡಿ ಎತ್ತುಗಳು ಈ ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದವು. ಈ ಆಯ್ಕೆ ಪ್ರಕ್ರಿಯೆಯನ್ನು ಪಶುಸಂಗೋಪನೆ ಇಲಾಖೆಯ ಅಧಿಕಾರಿಗಳು ನೆರವೇರಿಸಿದರು. ನೂರಾರು ರೈತರು ಮತ್ತು ರಾಸುಗಳ ಮಾಲೀಕರು ಈ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು.

 

 

LEAVE A REPLY

Please enter your comment!
Please enter your name here