ಮಂಗಳೂರು: ತಡರಾತ್ರಿ ದುಷ್ಕರ್ಮಿಗಳ ತಂಡ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಂಗಳೂರು ಹೊರವಲಯದ ಪಂಜಿಮೊಗರು ಎಂಬಲ್ಲಿ ನಡೆದಿದೆ. ದುಷ್ಕರ್ಮಿಗಳ ದಾಳಿಗೆ ಒಳಗಾಗಿ ಮೃತಪಟ್ಟ ಯುವಕನನ್ನು ರಾಕೇಶ್ (26) ಎಂದು ಗುರುತಿಸಲಾಗಿದೆ. ರಾಕೇಶ್ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದನು. ಈ ಕೊಲೆಗೆ ಇದೇ ಕಾರಣವಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಮೃತ ರಾಕೇಶ್ ಅವರ ಪ್ರೇಯಸಿಯ ಅಣ್ಣನಿಂದ ಈ ಕೃತ್ಯ ನಡೆದಿದೆ ಎಂದು ಆರೋಪಿಸಲಾಗಿದೆ. ನಿನ್ನೆ ರಾತ್ರಿ ತಂಗಿಯ ಪ್ರೀತಿಯ ಬಗ್ಗೆ ಮಾತನಾಡಲು ರಾಕೇಶ್ ನನ್ನು ಕರೆಯಲಾಗಿತ್ತು ಎಂದು ಹೇಳಲಾಗಿದೆ. ರಾಕೇಶ್ ಬರುತ್ತಿದ್ದಂತೆ ಮಾರಕಾಸ್ತ್ರದಿಂದ ತಂಡ ದಾಳಿ ಮಾಡಿ ಪರಾರಿಯಾಗಿದೆ.

ಮಂಗಳೂರಿನ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳಿಗಾಗಿ ಶೋಧ ನಡೆಸಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಮಂಗಳೂರು ಪೊಲೀಸ್ ಕಮೀಷನರ್ ಟಿ.ಆರ್.ಸುರೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Summary
ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಂಗಳೂರು ಹೊರವಲಯದ ಪಂಜಿಮೊಗರು ಎಂಬಲ್ಲಿ ನಡೆದಿದೆ.
Article Name
ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಂಗಳೂರು ಹೊರವಲಯದ ಪಂಜಿಮೊಗರು ಎಂಬಲ್ಲಿ ನಡೆದಿದೆ.
Description
ಮಂಗಳೂರಿನ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳಿಗಾಗಿ ಶೋಧ ನಡೆಸಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಮಂಗಳೂರು ಪೊಲೀಸ್ ಕಮೀಷನರ್ ಟಿ.ಆರ್.ಸುರೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here