ರಾಜಸ್ಥಾನ : ಮೀಸಲಾತಿಗೆ ಒತ್ತಾಯಿಸಿ ಗುಜ್ಜರ್ ಸಮುದಾಯ ನಡೆಸುತ್ತಿರುವ ಪ್ರತಿಭಟನೆ ಭಾನುವಾರ ಹಿಂಸಾರೂಪ ಪಡೆದುಕೊಂಡು ನಾಲ್ವರು ಪೊಲೀಸರು ಗಾಯಗೊಂಡಿದ್ದಾರೆ.

ರಾಜಸ್ಥಾನ ಧೋಲಪುರ್​ನಲ್ಲಿ ಜೈಪುರ್-ಅಹಮದಾಬಾದ್ ಸಂರ್ಪಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸುತ್ತಿದ್ದ ಪ್ರತಿಭಟನಾಕಾರರು ಮತ್ತು ಪೊಲೀಸರ ಮಧ್ಯೆ ಮಾತಿನ ಚಕಮಕಿ ನಡೆದು ಕಲ್ಲುತೂರಾಟಕ್ಕೆ ಕಾರಣವಾಯಿತು. ಪ್ರತಿಭಟನಾಕಾರರು ಅನೇಕ ವಾಹನಗಳಿಗೆ ಬೆಂಕಿ ಹಚ್ಚಿ ಹಾನಿ ಮಾಡಿದರು. ಇದರಿಂದ ನಾಲ್ವರು ಪೊಲೀಸರು ಗಾಯಗೊಂಡರು. ಇನ್ನೊಂದೆಡೆ ಸವಾಯಿ ಮಾಧೋಪುರ್ ರೈಲು ನಿಲ್ದಾಣದ ಬಳಿ ಪ್ರತಿಭಟನಾಕಾರರು ರೈಲು ತಡೆ ತೀವ್ರಗೊಳಿಸಿದ ಕಾರಣ, ಉತ್ತರ ರೈಲ್ವೆ ವಲಯದಲ್ಲಿ 20ಕ್ಕೂ ಹೆಚ್ಚು ರೈಲುಗಳ ಸಂಚಾರ ರದ್ದುಗೊಂಡಿತು. ನವದೆಹಲಿಗೆ ಸಂರ್ಪಸುವ ಪ್ರಮುಖ ಮಾರ್ಗದಲ್ಲಿ ಸಂಚಾರ ತಡೆ ಉಂಟಾದ ಕಾರಣ 250ಕ್ಕೂ ಹೆಚ್ಚು ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಯಿತು. ಸವಾಯಿ ಮಾಧೋಪುರ್ ಮತ್ತು ಬಯಾನ ಮಧ್ಯೆ ವಿಪರೀತ ಪ್ರಯಾಣಕರ ದಟ್ಟಣೆ ಉಂಟಾಯಿತು. ಇದನ್ನು ತಗ್ಗಿಸಲು ಪರ್ಯಾಯ ಮಾರ್ಗಗಳಲ್ಲಿ ವಿಶೇಷ ರೈಲುಗಳನ್ನು ಓಡಿಸಲಾಗುತ್ತಿದೆ. ಸವಾಯಿ ಮಾಧೋಪುರ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಭೇಟಿ ನೀಡಿದ ನಂತರ ಪರಿಸ್ಥಿತಿ ಹತೋಟಿಗೆ ಬಂದಿದೆ. ಧೋಲಪುರ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹೆಚ್ಚಿನ ಬಂದೋಬಸ್ತ್ ಕಲ್ಪಿಸಲಾಗಿದೆ.

Summary
ರಾಜಸ್ಥಾನ : ಹಿಂಸಾಚಾರಕ್ಕೆ ತಿರುಗಿದ ಗುಜ್ಜರ್​ ಪ್ರತಿಭಟನೆ !
Article Name
ರಾಜಸ್ಥಾನ : ಹಿಂಸಾಚಾರಕ್ಕೆ ತಿರುಗಿದ ಗುಜ್ಜರ್​ ಪ್ರತಿಭಟನೆ !
Description
ಸವಾಯಿ ಮಾಧೋಪುರ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಭೇಟಿ ನೀಡಿದ ನಂತರ ಪರಿಸ್ಥಿತಿ ಹತೋಟಿಗೆ ಬಂದಿದೆ. ಧೋಲಪುರ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹೆಚ್ಚಿನ ಬಂದೋಬಸ್ತ್ ಕಲ್ಪಿಸಲಾಗಿದೆ. 

LEAVE A REPLY

Please enter your comment!
Please enter your name here