ವಿಜಯಪುರ 
ವಿಜಯಪುರ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷೆ ನೀಲಮ್ಮ ಮೇಟಿ ಅವರು ಅತ್ತ ಬೆಂಗಳೂರಿನಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಇತ್ತ ವಿಜಯಪುರದಲ್ಲಿರುವ ಅವರ ಮನೆಯಲ್ಲಿ ಬುಧವಾರ ಬೆಳಗಿನ ಜಾವ ಕಳ್ಳತನ ನಡೆದಿದೆ.
ವಿಜಯಪುರದ ಕನಕದಾಸ ಬಡಾವಣೆಯಲ್ಲಿ ಕಳ್ಳತನ ನಡೆದಿದ್ದು, ಕಳ್ಳರು 4 ಲಕ್ಷ ರುಪಾಯಿ ನಗದು, 300 ಗ್ರಾಂ ಚಿನ್ನಾಭರಣ ಮತ್ತು 25 ಲಕ್ಷ ರುಪಾಯಿ ಮೌಲ್ಯದ  ಫಾರ್ಚುನರ್ ಕಾರನ್ನು ಕದ್ದೊಯ್ದಿದ್ದಾರೆ.
ನೀಲಮ್ಮ ಮೇಟಿ ಅವರು ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಸ್ಥಾನಕ್ಕೆ ರಾಜೀನಾಮೆ ಬೆಂಗಳೂರಿಗೆ ಬಂದಿದ್ದರು. ಇದೇ ಸಮಯವನ್ನು ಬಳಸಿಕೊಂಡ ಕಳ್ಳರು ಅವರ ಮನೆ ಬೀಗ ಮುರಿದು ಕಳ್ಳತನ ಮಾಡಿದ್ದಾರೆ.
ನೀಲಮ್ಮ ಮೇಟಿ ಅವರು ಇಂದು ಬೆಳಗ್ಗೆ ವಾಪಸ್ ಮನೆಗೆ​ ಬಂದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ.
ಸ್ಥಳಕ್ಕೆ ಜಲನಗರ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ನೀಲಮ್ಮ ಮೇಟಿ ಅವರು, ಮನೆಯಲ್ಲಿ 50 ಲಕ್ಷ ರುಪಾಯಿ ಮೌಲ್ಯದ ವಸ್ತುಗಳಿದ್ದವು. ಪ್ಲಾನ್ ಮಾಡಿ ಕಳ್ಳತನ ಮಾಡಲಾಗಿದೆ. ಈ ಸಂಬಂಧ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ಭೇದಿಸುವ ಭರವಸೆ ನೀಡಿದ್ದಾರೆ ಎಂದರು.
:

LEAVE A REPLY

Please enter your comment!
Please enter your name here