ಬೆಂಗಳೂರು

ಡಿಸೆಂಬರ್ 06: ಸಿದ್ದರಾಮಯ್ಯ ಅವರು ಯಾವಾಗ ಬೇಕಾದರೂ ಸಿಎಂ ಆಗಬಹುದು ಎಂದು ಕಾಂಗ್ರೆಸ್ ಶಾಸಕ ಜೆ.ಎನ್.ಗಣೇಶ್ ಹೇಳಿದ್ದಾರೆ. ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ 50 ಕ್ಕೂ ಹೆಚ್ಚು ಶಾಸಕರ ಬೆಂಬಲ ಇದೆ, ಅವರು ಯಾವಾಗ ಬೇಕಾದರೂ ಸಿಎಂ ಆಗಬಹುದು ಎಂದು ಅವರು ಹೇಳಿದ್ದಾರೆ.

ಈ ಹಿಂದೆ ಸಹ ಈ ರೀತಿಯ ಮಾತುಗಳು ಹರಿದಾಡುತ್ತಿದ್ದವು, ಹಲವು ಕಾಂಗ್ರೆಸ್ ಶಾಸಕರು ಸಿದ್ದರಾಮಯ್ಯ ಅವರು ಸಿಎಂ ಆಗಬೇಕು ಎಂದು ಹೇಳಿದ್ದರು, ಆದರೆ ಇದನ್ನು ಸಿದ್ದರಾಮಯ್ಯ ಅವರು ನಿರಾಕರಿಸಿದ್ದರು.

ಮುಂದುವರೆದು ಮಾತನಾಡಿರುವ ಶಾಸಕ ಗಣೇಶ್, ಸಂಪುಟ ವಿಸ್ತರಣೆ ಡಿಸೆಂಬರ್ 22 ಕ್ಕೆ ಮಾಡುತ್ತಾರೆ ಎಂದು ಹೇಳಿದ್ದಾರಾದರೂ ನಮಗೆ ಆ ಬಗ್ಗೆ ನಂಬಿಕೆ ಇಲ್ಲ. ಲೋಕಸಭೆ ಚುನಾವಣೆ ಮುಗಿಯುವವರೆಗೂ ವಿಸ್ತರಣೆ ಆಗುತ್ತದೆಯೋ ಇಲ್ಲವೋ ಅನುಮಾನ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಮತ್ತೆ ಸಿಎಂ ಆಗುವ ಸಾಧ್ಯತೆ ಇದೆ ಎಂಬ ಶಾಸಕ ಗಣೇಶ್ ಹೇಳಿಕೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸುವ ಸಾಧ್ಯತೆ ಇದೆ.

:

LEAVE A REPLY

Please enter your comment!
Please enter your name here