ಹೊಸದಿಲ್ಲಿ: ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಉಗ್ರನ ಆತ್ಮಾಹುತಿ ದಾಳಿ ಬಳಿಕ ಭಾರತ – ಪಾಕ್ ನಡುವಿನ ಸಂಬಂಧ ಮತ್ತಷ್ಟು ಹದಗೆಡುತ್ತಿದೆ. ಈ ಬೆನ್ನಲ್ಲೇ ಪಾಕಿಸ್ತಾನದ ವಿರುದ್ಧ ವಾಟರ್ ಬಾಂಬ್‌ ಪ್ರಯೋಗಿಸಲು ಕೇಂದ್ರ ಸರಕಾರ ಮುಂದಾಗಿದೆ. ಪುಲ್ವಾಮಾ ದಾಳಿಗೆ ಸೇಡು ತೀರಿಸಿಕೊಳ್ಳಲು ಕೇಂದ್ರ ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ದೊಡ್ಡ ಯೋಜನೆಯೊಂದನ್ನು ಹಾಕಿದ್ದು, 1960ರ ಸಿಂಧೂ ನದಿ ನೀರು ಹಂಚಿಕೆ ಒಪ್ಪಂದವನ್ನು ಮರುಪರಿಶೀಲಿಸಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.

ಇದರಿಂದ ಪಾಕಿಸ್ತಾನಕ್ಕೆ ಹರಿಯುತ್ತಿರುವ ಮೂರು ನದಿಗಳ ನೀರನ್ನು ನಿಲ್ಲಿಸಿ ಅದನ್ನು ಯುಮುನಾ ನದಿಗೆ ಹೋಗುವಂತೆ ಯೋಜನೆಯೊಂದನ್ನು ಪರಿಕಲ್ಪನೆ ಮಾಡಲಾಗಿದೆ. ಈ ಯೋಜನೆ ಕಾರ್ಯರೂಪಕ್ಕೆ ಬಂದರೆ ಪಾಕಿಸ್ತಾನಕ್ಕೆ ಹರಿಯುತ್ತಿರುವ ನೀರು ಸಂಪೂರ್ಣವಾಗಿ ಬಂದ್ ಆಗಲಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಎಚ್ಚರಿಕೆ ನೀಡಿದ್ದಾರೆ.

ಉತ್ತರ ಪ್ರದೇಶದ ಭಾಗ್ಪತ್‌ನಲ್ಲಿ ಬುಧವಾರ ( ಫೆಬ್ರವರಿ 20, 2019)ರಂದು ಮಾತನಾಡಿದ ನಿತಿನ್ ಗಡ್ಕರಿ, ಪುಲ್ವಾಮಾ ಉಗ್ರರ ದಾಳಿ ಬಳಿಕ ಭಯೋತ್ಪಾದನೆಗೆ ಕುಮ್ಮಕ್ಕು ನೀಡುವುದನ್ನು ಪಾಕಿಸ್ತಾನ ನಿಲ್ಲಿಸದಿದ್ದರೆ 1960ರ ಭಾರತ-ಪಾಕಿಸ್ತಾನ ನಡುವಿನ ಸಿಂಧೂ ನದಿ ಹಂಚಿಕೆ ಒಪ್ಪಂದವನ್ನು ರದ್ದುಗೊಳಿಸಬೇಕಾಗುತ್ತದೆ ಎಂದು ಪರೋಕ್ಷವಾಗಿ ಪಾಕಿಸ್ತಾನ ಪ್ರಧಾನಿ ಇಮ್ರಾನ್‌ ಖಾನ್‌ಗೆ ಎಚ್ಚರಿಸಿದ್ದಾರೆ.

”ನಮ್ಮ ಮೂರು ನದಿಗಳ ನೀರು ಪಾಕಿಸ್ತಾನಕ್ಕೆ ಹರಿದು ಹೋಗುತ್ತಿದೆ. ನ್ಯಾಯಸಮ್ಮತವಾಗಿ ನಮಗೆ ಸಿಗುತ್ತಿದ್ದ ನೀರು ಪಾಕ್‌ ಪಾಲಾಗುತ್ತಿದೆ. ಈ ಹಿನ್ನೆಲೆ ಆ ಮೂರು ನದಿಗಳ ನೀರು ಯಮುನಾಗೆ ಹರಿಯುವಂತೆ ಯೋಜನೆಯೊಂದನ್ನು ಪರಿಕಲ್ಪನೆ ಮಾಡಲಾಗಿದೆ. ಇದು ರೆಡಿಯಾದ ಬಳಿಕ ಯಮುನಾ ನದಿಯಲ್ಲಿ ಸಾಕಷ್ಟು ನೀರಿರುತ್ತದೆ” ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಉತ್ತರ ಪ್ರದೇಶದಲ್ಲಿ ಹಲವು ನೀರಿನ ಯೋಜನೆಗಳ ಉದ್ಘಾಟನೆ ವೇಳೆ ಕೇಂದ್ರ ಸಚಿವರು ಈ ಮಾತುಗಳನ್ನಾಡಿದ್ದಾರೆ.

ಫೆಬ್ರವರಿ 14ರಂದು ನಡೆದ ಪುಲ್ವಾಮಾ ಉಗ್ರರ ದಾಳಿ ಪ್ರಕರಣದಲ್ಲಿ ಸಿಆರ್‌ಪಿಎಫ್‌ನ 40 ಜವಾನರು ಹುತಾತ್ಮರಾಗಿದ್ದರು. ಬಳಿಕ ಕೇಂದ್ರ ಸರಕಾರ ಪಾಕ್‌ಗೆ ನೀಡಿದ್ದ ಅತ್ಯಂತ ನೆಚ್ಚಿನ ರಾಷ್ಟ್ರ ಸ್ಥಾನಮಾನವನ್ನು ತೆಗೆದುಹಾಕಿತ್ತು.

Summary
ಹೊಸದಿಲ್ಲಿ : ಪಾಕ್‌ಗೆ ಹರಿಯುತ್ತಿರುವ 3 ನದಿಗಳ ನೀರು ನಿಲ್ಲಿಸುವ ಎಚ್ಚರಿಕೆ ನೀಡಿದ ನಿತಿನ್ ಗಡ್ಕರಿ
Article Name
ಹೊಸದಿಲ್ಲಿ : ಪಾಕ್‌ಗೆ ಹರಿಯುತ್ತಿರುವ 3 ನದಿಗಳ ನೀರು ನಿಲ್ಲಿಸುವ ಎಚ್ಚರಿಕೆ ನೀಡಿದ ನಿತಿನ್ ಗಡ್ಕರಿ
Description
ಬಳಿಕ ಕೇಂದ್ರ ಸರಕಾರ ಪಾಕ್‌ಗೆ ನೀಡಿದ್ದ ಅತ್ಯಂತ ನೆಚ್ಚಿನ ರಾಷ್ಟ್ರ ಸ್ಥಾನಮಾನವನ್ನು ತೆಗೆದುಹಾಕಿತ್ತು.

LEAVE A REPLY

Please enter your comment!
Please enter your name here