ರಾಜ್ಯದ 14,454 ಶಾಲೆಗಳಿಂದ 8,41,649 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ವರ್ಷ 3,578 ವಿದ್ಯಾರ್ಥಿಗಳ ಹೆಚ್ಚಳವಾಗಿದೆ. 4,651 ಅಂಗವಿಕಲ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

2,847 ಪರೀಕ್ಷಾ ಕೇಂದ್ರಗಳ ಪೈಕಿ ಸರ್ಕಾರಿ 1,140 ಮತ್ತು ಅನುದಾನಿತ 1,124, ಖಾಸಗಿ 583 ಕೇಂದ್ರಗಳಿವೆ. ಇದರಲ್ಲಿ 46 ಸೂಕ್ಷ್ಮ ಪರೀಕ್ಷಾ ಕೇಂದ್ರ, 7 ಅತೀ ಸೂಕ್ಷ್ಮ ಪರೀಕ್ಷಾ ಕೇಂದ್ರಗಳಾಗಿವೆ.

ಪರೀಕ್ಷೆಯನ್ನು ಸುಗಮ ವಾಗಿ ನಡೆಸುವ ಉದ್ದೇಶದಿಂದ ಶಿಕ್ಷಣ ಇಲಾಖೆಯು ವಾಣಿಜ್ಯ ತೆರಿಗೆ, ಖಜಾನೆ ಇಲಾಖೆ, ಪೊಲೀಸ್ ಇಲಾಖೆಗಳಿಗೆ ಪತ್ರ ಬರೆದು ಸಹಕಾರಕ್ಕೆ ಮನವಿ ಮಾಡಿದೆ. ಎಲ್ಲ ಖಜಾನೆಗಳಲ್ಲಿ ಭದ್ರತಾ ಕೊಠಡಿಗಳಲ್ಲಿರಿಸಲಾದ ಪರೀಕ್ಷಾ ಗೌಪ್ಯ ಸಾಮಗ್ರಿಗಳನ್ನು ಜಿಲ್ಲಾ ಖಜಾನೆಗಳಲ್ಲಿ ಅಳವಡಿಸಿರುವ ಸಿಸಿ ಕ್ಯಾಮರಾಗಳ ಮೂಲಕ ಮಂಡಳಿಯಲ್ಲಿ ಕುಳಿತು ನಿರ್ವಹಣೆ ಮಾಡಲಾಗುತ್ತಿದೆ.

ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ 2019ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಗುರುವಾರ 2,847 ಪರೀಕ್ಷಾ ಕೇಂದ್ರಗಳಲ್ಲಿ ಆರಂಭವಾಗಲಿದೆ.

LEAVE A REPLY

Please enter your comment!
Please enter your name here