the-bjp-mp-filed-a-petition-in-the-apex-court-against-rahul-gandhi

ನವದೆಹಲಿ: ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ ಶುಕ್ರವಾರ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ವಿರುದ್ಧ ನ್ಯಾಯಾಂಗ ನಿಂದನೆ ಅಡಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದಾರೆ.  ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯ್‌ ಈ ಪ್ರಕರಣದ ವಿಚಾರಣೆಯನ್ನು ಏ. 15ಕ್ಕೆ ನಡೆಸುವುದಾಗಿ ತಿಳಿಸಿದ್ದಾರೆ.

the-bjp-mp-filed-a-petition-in-the-apex-court-against-rahul-gandhi

ರಫೇಲ್‌ ತೀರ್ಪಿಗೆ ಸಂಬಂಧಿಸಿದಂತೆ ರಾಹುಲ್‌ ಗಾಂಧಿಯವರು ತಮ್ಮ ವೈಯಕ್ತಿಕ ಹೇಳಿಕೆಯನ್ನು ಸುಪ್ರೀಂ ಕೋರ್ಟ್‌ನ ಮೇಲೆ ಹಾಕಿದ್ದಾರೆ ಮತ್ತು ಈ ಕುರಿತು ಪೂರ್ವಾಗ್ರಹವನ್ನು ಸೃಷ್ಟಿಸಲು ಪ್ರಯತ್ನಿಸಿದ್ದಾರೆ ಎಂದು ಲೇಖಿ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.  ಲೇಖಿ ಪರವಾಗಿ ಹಿರಿಯ ವಕೀಲರಾದ ಮುಕುಲ್‌ ರೋಹಟಗಿ ಹಾಜರಾಗಿ, ರಾಹುಲ್‌ ಗಾಂಧಿಯವರು ‘ಚೌಕಿದಾರ್‌ ಚೋರ್‌ ಹೈ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ’ ಎಂದು ತಿಳಿಸಿದ್ದಾರೆ ಎಂದು ನ್ಯಾಯಪೀಠಕ್ಕೆ ತಿಳಿಸಿದ್ದಾರೆ

LEAVE A REPLY

Please enter your comment!
Please enter your name here