inland-rainfall-in-malnad-its-likely-to-continue-for-fourteen-days

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನಿಂದ ಕನ್ಯಾಕುಮಾರಿವರೆಗೆ ಉಂಟಾಗಿರುವ ವಾಯುಭಾರ ಕುಸಿತದಿಂದ ಕಳೆದೆರಡು ದಿನದಿಂದ ವಿವಿಧ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಇನ್ನೂ ಮೂರ್ನಾಲ್ಕು ದಿನ ಮುಂದುವರಿಯುವ ಸಾಧ್ಯತೆ ಇದೆ.

inland-rainfall-in-malnad-its-likely-to-continue-for-fourteen-days

ಮಲೆನಾಡಿನ ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮೈಸೂರು, ಉತ್ತರ ಕರ್ನಾಟಕದ ಗದಗ, ಹಾವೇರಿ, ಕೊಪ್ಪಳ, ಬೆಳಗಾವಿ, ರಾಯಚೂರು ಸೇರಿ ಕೆಲ ಜಿಲ್ಲೆಗಳಲ್ಲಿ ಏ.16ರವರೆಗೆ ಬಿರುಸಾದ ಗಾಳಿ, ಗುಡುಗು, ಸಿಡಿಲು ಸಹಿತ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.ಕಲಬುರಗಿಯಲ್ಲಿ ಗರಿಷ್ಠ ತಾಪಮಾನ 42.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಕೊಪ್ಪಳ, ರಾಯಚೂರು,ಬಳ್ಳಾರಿ ಹಾಗೂ ವಿಜಯಪುರದಲ್ಲಿ ತಲಾ 40 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿದೆ. ಬಾಗಲಕೋಟೆಯಲ್ಲಿ 39.8, ಬೀದರ್​ನಲ್ಲಿ 39.4, ಗದಗದಲ್ಲಿ 39, ಬೆಳಗಾವಿ, ಧಾರವಾಡದಲ್ಲಿ ತಲಾ 38.1, ದಾವಣಗೆರೆಯಲ್ಲಿ 38 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿದೆ

LEAVE A REPLY

Please enter your comment!
Please enter your name here